ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…