ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ಬಾಲಕಿ ಕುಟುಂಬದ ಸಂಬಂಧಿಯಾದ ಇರ್ಫಾನ್ ಆಗಾಗ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಇದೇ ರೀತಿ ಜು.20 ರಂದು ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್‌ನಲ್ಲಿ ಕರೆದೊಯ್ದಿದ್ದಾನೆ. ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ವಿಚಾರಿಸಿದಾಗ, ಇರ್ಫಾನ್ ಖಾನ್ ಬಾಲಕಿಯನ್ನ ಕರೆದೊಯ್ಯುತ್ತಿದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದರು.
ಬಳಿಕ ಇರ್ಫಾನ್‍ಗೆ ಫೋನ್ ಮಾಡಿದ ಫೋಷಕರು ಮಗು ಬಗ್ಗೆ ವಿಚಾರಿಸಿದಾಗ ನನಗೇನು ಗೊತ್ತಿಲ್ಲ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನಗೊಂಡ ಪೋಷಕರು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಆರೋಪಿ ಬೆಂಗಳೂರು-ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿ ಬಳಿ ಓಡಾಡಿರುವುದನ್ನ ಗಮನಿಸಿ, ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಪೊದೆಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು.
ಇದೀಗ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಘಟನೆ ಖಂಡಿಸಿ ಮಾಗಡಿಯ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ಮಹಿಳೆಯರು ಸೇರಿ ನೂರಾರು ಮಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ, ಇಲ್ಲದಿದ್ದರೆ ಎನ್‍ಕೌಂಟ್ ಮಾಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…