Featured

4 ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ : ಆರೋಪಿ ಅರೆಸ್ಟ್  – vishwanews24

4 ವರ್ಷದ ಬಾಲಕಿಯ ಅಪಹರಿಸಿ ಅತ್ಯಾಚಾರವೆಸಗಿ, ಕೊಲೆ : ಆರೋಪಿ ಅರೆಸ್ಟ್

ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ  ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

ಬಾಲಕಿ ಕುಟುಂಬದ ಸಂಬಂಧಿಯಾದ ಇರ್ಫಾನ್ ಆಗಾಗ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಇದೇ ರೀತಿ ಜು.20 ರಂದು ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್‌ನಲ್ಲಿ ಕರೆದೊಯ್ದಿದ್ದಾನೆ. ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ವಿಚಾರಿಸಿದಾಗ, ಇರ್ಫಾನ್ ಖಾನ್ ಬಾಲಕಿಯನ್ನ ಕರೆದೊಯ್ಯುತ್ತಿದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದರು.

ಬಳಿಕ ಇರ್ಫಾನ್‍ಗೆ ಫೋನ್ ಮಾಡಿದ ಫೋಷಕರು ಮಗು ಬಗ್ಗೆ ವಿಚಾರಿಸಿದಾಗ ನನಗೇನು ಗೊತ್ತಿಲ್ಲ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನಗೊಂಡ ಪೋಷಕರು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಆರೋಪಿ ಬೆಂಗಳೂರು-ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿ ಬಳಿ ಓಡಾಡಿರುವುದನ್ನ ಗಮನಿಸಿ, ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಪೊದೆಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು.

ಇದೀಗ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಘಟನೆ ಖಂಡಿಸಿ ಮಾಗಡಿಯ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ಮಹಿಳೆಯರು ಸೇರಿ ನೂರಾರು ಮಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ, ಇಲ್ಲದಿದ್ದರೆ ಎನ್‍ಕೌಂಟ್ ಮಾಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago