ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆಂದು ಹಾಜರಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…