Featured

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

ಬೆಂಗಳೂರು:. 400 ವರ್ಷಗಳ ನಂತರ  ಅಚ್ಚರಿ ಆಕಾಶದಲ್ಲಿ ನಡೆಯಲಿದೆ. ಖಗೋಳವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಿದು. ಅದೇನೆಂದರೆ, ಗುರು ಮತ್ತು ಶನಿಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿದ್ದು, ಇದನ್ನು ವಿಜ್ಞಾನಿಗಳು ‘ಮಹಾ ಸಂಯೋಗ’ ಎಂದೇ ಕರೆದಿದ್ದಾರೆ.

ಅಂದಹಾಗೆ ಗುರು ಮತ್ತು ಶನಿ ಗ್ರಹಗಳು ಡಿಸೆಂಬರ್ 13ರಿಂದಲೇ ಸಮೀಪಿಸುತ್ತಿವೆ. ಅದರ ಅಂತರ ಇಂದು ಅತ್ಯಂತ ಕಡಿಮೆಯಾಗಿದ್ದು, ಅಂಥ ಅಪೂರ್ವ ನೋಟವನ್ನು ಎಲ್ಲರೂ ಕಣ್ತುಂಬಿಸಿಕೊಳ್ಳಬಹುದಾಗಿದೆ. ಏಕೆಂದರೆ ನಾಳೆಯಿಂದ ಮತ್ತೆ ಈ ಎರಡೂ ಗ್ರಹಗಳು ದೂರ ದೂರ ಸರಿಯಲು ಆರಂಭಿಸುತ್ತವೆ.

ಶನಿ ಗ್ರಹದ ಕೆಳಗಡೆಗಳಲ್ಲಿ ಗುರುಗ್ರಹ ಕಾಣಿಸಿಕೊಳ್ಳಲಿದೆ. ನಾಳೆಯಿಂದ ಮತ್ತೆ ಪಥ ಬದಲಿಸುವ ಈ ಎರಡೂ ಗ್ರಹಗಳು ಉಲ್ಟಾ ಕಾಣಿಸಲಿವೆ. ಅಂದರೆ ಗುರುಗ್ರಹ ಮೇಲುಗಡೆ ಹಾಗೂ ಶನಿಗ್ರಹ ಕೆಳಗೆ ಆಗಲಿದೆ.

‘ಈ ಎರಡೂ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸೂರ್ಯನನ್ನು ಸುತ್ತುತ್ತಿರುತ್ತವೆ. ಆದ್ದರಿಂದ ಎರಡೂ ಗ್ರಹಗಳು ಇದೀಗ ಪರಸ್ಪರ ಹಾದುಹೋಗಲಿವೆ. ಈ ಎರಡೂ ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಗುರು ಮತ್ತು ಶನಿ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿರುವ ಕಾರಣ, ಇಂಥದ್ದೊಂದು ವಿದ್ಯಮಾನ ನಡೆಯಲಿದೆ ಎಂದಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ನಾಸಾ’ದ ವಿಜ್ಞಾನಿಗಳು, ಇಂದು ನೀವು ಇದನ್ನು ನೋಡಲು ಮಿಸ್​ ಮಾಡಿಕೊಂಡರೆ ಮತ್ತೆ ನೀವು 60 ವರ್ಷ ಕಾಯಬೇಕು ಎಂದಿದ್ದಾರೆ.

ಭೂಮಿಯಿಂದ ಸೂರ್ಯನಿಗಿರುವ ದೂರದ 5ರಷ್ಟು ದೂರದಲ್ಲಿ ಗುರುಗ್ರಹ ವಿದ್ದು ಇದು ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳು ಬೇಕು. ಹಾಗೆಯೇ ಶನಿಯು, ಭೂಮಿ ಹಾಗು ಸೂರ್ಯನ ಅಂತರದ ಎರಡರಷ್ಟು ಅಂತರವಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ತೆಗುದುಕೊಳ್ಳುತ್ತದೆ. ಈ ಎರಡು ಗ್ರಹಗಳು ಸಮೀಪಿಸಲು ಕನಿಷ್ಠ 20 ವರ್ಷಗಳು ಬೇಕು. ಆದ್ದರಿಂದ ಈ ಗ್ರಹಗಳ ಯುತಿಯನ್ನು ಸಮಾಗಮ ಎಂದು ಕರೆಯಲಾಗುತ್ತದೆ.

ಈ ಜೋಡಿ ಕೇವಲ 1 ಗಂಟೆ 45 ನಿಮಿಷಗಳಷ್ಟು ಮಾತ್ರ ಕಾಣಸಿಗುತ್ತದೆ. ಎರಡು ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8 ಗಂಟೆಯ ವರೆಗೆ ಕಂಡು, ನಂತರ ನೈರುತ್ಯದಲ್ಲಿ 8 ಗಂಟೆಗೆ ಅಸ್ತವಾಗುತ್ತದೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಡಿ.21ರಂದು ಸಂಜೆ 6ಗಂಟೆಗೆ ಈ ಗ್ರಹಗಳ ವೀಕ್ಷಣೆಯನ್ನು ಆಯೋಜಿಸಲಾಗಿದೆ ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago