ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಧ್ವಜಾರೋಹಣ ಸಂಪನ್ನ, ಫೆಬ್ರವರಿ 18 ರಂದು ಮನ್ಮಹಾರಥೋತ್ಸವ.
ಕಾಪು: ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಫೆ.12ರಿಂದ 20 ರವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶುಕ್ರವಾರ ಧ್ವಜಾರೋಹಣ ಸಂಪನ್ನಗೊಂಡಿತು.
ದೇವಳದ ತಂತ್ರಿಗಳಾದ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಅನುಷ್ಠಾನಗಳೊಂದಿಗೆ ಬೆಳಗ್ಗೆ 8.35 ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು.
ಫೆ 18 ರಂದು ಶ್ರೀ ಮನ್ಮಹಾರಥೋತ್ಸವ:
ಕ್ಷೇತ್ರದ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಫೆ.18ರಂದು ಶ್ರೀ ಮನ್ಮಹಾರಥೋತ್ಸವ ಸಂಪನ್ನಗೊಳ್ಳಲಿದೆ.
ನಾನಾ ಧಾರ್ಮಿಕ ಅನುಷ್ಠಾನಗಳೊಂದಿಗೆ ಆ ದಿನ ಬೆಳಗ್ಗೆ ರಥಾವರೋಹಣ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 8 ಗಂಟೆಗೆ ಶ್ರೀ ಮನ್ಮಹಾರಥೋತ್ಸವ ಬಳಿಕ, ಉತ್ಸವ ಬಲಿ, ಕಟ್ಟೆ ಪೂಜೆ, ಭೂತ ಬಲಿ, ಶಯನ ಸಹಿತ ಧಾರ್ಮಿಕ ಅನುಷ್ಠಾನಗಳೊಂದಿಗೆ ವರ್ಷಾವಧಿ ಉತ್ಸವ ಸಂಪನ್ನಗೊಳ್ಳಲಿದೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ಎಂ ಬಂಗೇರ, ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ , ಪ್ರಮುಖರಾದ ಕೆ.ಪಿ.ಆಚಾರ್ಯ, ಕೆ.ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ್ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ. ಶೆಟ್ಟಿ, ದಿವಾಕರ ಶೆಟ್ಟಿ ಕಾಪು, , ರತ್ನಾಕರ ಹೆಗ್ಡೆ ಕಲಿಲಬೀಡು,ವಿಕ್ರಮ್ ಕಾಪು ಶ್ರೀಧರ ಶೆಣೈ, , ಲಕ್ಷ್ಮೀಕಾಂತ್ ಕೆ. ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ತಂತ್ರಿ, ಸರೋಜಿನಿ ಜೆ ಶೆಟ್ಟಿ,ದೇವರಾಜ್ ಪಡು,ಉಮೇಶ್ ಪೂಜಾರಿ, ರಮಾ ವೈ,ಎಮ್ ಕುಟ್ಟಿ,ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…