Featured

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ-ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಉಡುಪಿ : ರಾಜ್ಯದಲ್ಲಿ ೨ ಕೋಟಿಗೂ ಅಧಿಕ ಯುವಕರಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಯುವಪ್ರತಿಭೆಗಳ ಕಲೆಯನ್ನು ಗುರುತಿಸಿ , ಅವರ ಪ್ರತಿಭೆಯನ್ನು ದೇಶ-ವಿದೇಶಗಳಲ್ಲಿಯೂ ಮೆರಗು ಮೂಡಿಸುವಂತೆ ಮಾಡುವ ನಿಟ್ಟಿನಲ್ಲಿ , ರಾಜ್ಯದಲ್ಲಿ ಯುವಕರನ್ನು ಪ್ರೋತ್ಸಾಹಿಸುವಂತಹ ಯೋಜನೆಗಳನ್ನು ತರಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ಹೇಳಿದರು.

ಅವರು ಶುಕ್ರವಾರ ಮಟ್ಟಾರುವಿನಲ್ಲಿ , ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ೩.೨೯ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾದನೆ ತೋರುವ ಯುವಕರಿಗೆ ಅಗತ್ಯ ತರಬೇತಿ, ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು, ಯುವಕರ ಹೊಸ ಪ್ರತಿಭೆಯನ್ನು ಅನಾವರಣಗೋಳಿಸಲು ಸುಸಜ್ಜಿತ ವೇದಿಕೆ ಕಲ್ಪಿಸಲಾಗುವುದು, ಕರಾವಳಿ ಭಾಗದ ಜನತೆಯು ಕಲೆ, ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದಿದ್ದಾರೆ ಎಂದು ಸಚಿವರು ಹೇಳಿದರು. ಕೋವಿಡ್ ಎರಡನೇ ಅಲೆ ಕೇರಳ ಮತ್ತು ಮಹಾರಾಷ್ಟçದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅದರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು.ಸಭೆ, ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಚಿವ ಡಾ.ಕೆ.ಸಿ. ನಾರಾಯಣಗೌಡ ಹೇಳಿದರು.

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಆದಷ್ಟು ಶೀಘ್ರದಲ್ಲಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ ಪ್ರಯೋಜನ ಒದಗಿಸಲಾಗುವುದು ಹಾಗೂ ಸ್ಥಳೀಯ ಜನರ ಸಮಸ್ಯೆಗಳಿಗೆ ಅನುಗುಣವಾಗಿ ಯೋಜನೆಗಳನ್ನು ಗುರುತಿಸಿ , ಪ್ರಾಥಮಿಕ ಸರ್ವೇ, ವರದಿ ಮತ್ತು ಸಮಗ್ರ ಯೋಜನಾ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು.

ಕಾರ್ಯಕ್ರಮದ ಮುಖ್ಯಅಥಿತಿಯಾಗಿ ಮಾತನಾಡಿದ ಕರಾವಳಿ ಪ್ರಾಧಿಕಾರದಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ , ಪ್ರಾಧಿಕಾರದ ವತಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಇದುವರೆಎ ೪ ತೂಗು ಸೇತುವೆ, ೧೧೭ ಕಾಲುಸಂಕ/ಕಿರು ಸೇತುವೆ, ೩೫ ಸುಸಜ್ಜಿತ ಮೀನು ಮಾರುಕಟ್ಟೆ , ೮ ಉದ್ಯಾನವನ, ೯೦ ರಸ್ತೆ ಸೇರಿದಂತೆ ಹಲವು ಕಾಮಗಾರಿಗಳನ್ನು ಮುಕ್ತಾಯಗೊಳಿಸಿದ್ದು, ಪ್ರಸಕ್ತ ಬಜೆಟ್ ನಲ್ಲಿ ಪ್ರಾಧಿಕಾರಕ್ಕೆ ೧೦೦ ಕೋಟಿ ರೂ ಗಳ ಅನುದಾನವನ್ನು ಕೋರಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ತಾ.ಪಂ ಸದಸ್ಯೆ ಗೀತಾ ವಾಗ್ಲೆ, ಶಿರ್ವ ಗ್ರಾಂ.ಪA. ಅಧ್ಯಕ್ಷೆ ಗ್ರೆಗೋರಿ ಕೊನ್ರಾಡ್ ಕಸ್ತಲಿನೋ, ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಸ್ಥಳೀಯ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.ಕರಾವಳಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago