ಉಡುಪಿ, ಜೂ.8: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ (52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.
ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…