Featured

ಮಂಗಳೂರು: ತೈಲಬೆಲೆ , ಗ್ಯಾಸ್ ದರ ಏರಿಕೆ :  ಜನರನ್ನು ಲೂಟಿ ಮಾಡುವ ಸರ್ಕಾರ’ – ಐವನ್ ಡಿ’ಸೋಜಾ – Vishwanews24

ಮಂಗಳೂರು: ತೈಲಬೆಲೆ , ಗ್ಯಾಸ್ ದರ ಏರಿಕೆ :  ಜನರನ್ನು ಲೂಟಿ ಮಾಡುವ ಸರ್ಕಾರ’ – ಐವನ್ ಡಿ’ಸೋಜಾ – Vishwanews24

ಮಂಗಳೂರು : ತೈಲಬೆಲೆ, ಗ್ಯಾಸ್ ದರವನ್ನು ಏರಿಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರಿಂದ ಲೂಟಿ ಮಾಡ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಕಿಡಿಕಾರಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ‌ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ಹೊರೆಯಾಗಿದೆ. ಕೇಂದ್ರ ಸರ್ಕಾರ ದರ ನಿಯಂತ್ರಣ ಮಾಡಲು ತೈಲ, ಅಡುಗೆ ಅನಿಲ ದರವನ್ನು ನಿಯಂತ್ರಣ ಮಾಡಬೇಕಿತ್ತು. ಆದರೆ ಅದನ್ನು ಮಾಡದ ಕಾರಣ ಜನರು ಈಗ ಸಂಕಷ್ಟ ಅನುಭವಿಸುವಂತಾಗಿದೆ ಎಂದರು.

ಯಾವಾಗ ದೇಶದಲ್ಲಿ ಕೊರೊನಾ ಪ್ರವೇಶವಾಯಿತೋ, ಆವಾಗಿನಿಂದ ಸಂಕಷ್ಟ ಆರಂಭವಾಯಿತು.‌ ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದರ ಏರಿಕೆ ಮಾಡೋ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ಕೂಡಲೇ ಉತ್ತರ ನೀಡಬೇಕು ಎಂದು ಆಗ್ರಹಿಸಿದ ಅವರು, ಕೊರೊನಾದಂತಹ ಸಂಕಷ್ಟದ ಕಾಲದಲ್ಲಿ ಅದಾನಿಯಂತಹವರ ಆಸ್ತಿ‌ ಮೂರು ಲಕ್ಷ ಕೋಟಿ ಜಾಸ್ತಿಯಾಗಿದೆ. ಈ‌ ಮೂಲಕ ನಮಗೆ ದೇಶದ ಆಸ್ತಿ ಎಲ್ಲಿಗೆ ಹೋಗುತ್ತಿದೆ ಎಂಬುದು ಗೊತ್ತಾಗುತ್ತದೆ ಅಂದರು.‌

ಇಂತಹ ಪರಿಸ್ಥಿತಿ ಭಾರತ ದೇಶಕ್ಕೆ ಬಂದಿರುವುದು ದುರಾದೃಷ್ಟಕರ, ಖಂಡನೀಯ. ಕೂಡಲೇ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಇಳಿಸಬೇಕು ಎನ್ನುವುದು ನಮ್ಮ ಹೋರಾಟ ಅಂದರು. ತೈಲ, ಗ್ಯಾಸ್ ಜೊತೆಗೆ ದಿನನಿತ್ಯ ಬಳಕೆಯ ವಸ್ತುಗಳ ದರ ಏರಿಕೆಯಾಗುತ್ತಿದ್ದು ಇದನ್ನು ಖಂಡಿಸಿ ನಾವು ಸಂಘಟಿತರಾಗಿ ಹೋರಾಟ ಮಾಡಲಿದ್ದೇವೆ ಎಂದರು. ದರ ಏರಿಕೆಯನ್ನು ‌ಖಂಡಿಸಿ ಜೂನ್ 14 ರ ಸೋಮವಾರ ಮಂಗಳೂರು ನಗರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಜಾಥಾ ನಡೆಯಲಿದೆ ಎಂದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago