Featured

ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24

ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24

ಪಡುಬಿದ್ರಿ: ಚತುಃಷ್ಪಥ ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರ ನೇತೃತ್ವದಲ್ಲಿ ನವಯುಗ ಶಾಖಾ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಆಗ್ರಹಿಸಿದ್ದಾರೆ.

ಕಚೇರಿಗೆ ಬೀಗ ಜಡಿಯಲು ನಿರ್ಧರಿಸಿದ ಗ್ರಾ. ಪಂ. ಸದಸ್ಯರು ನವಯುಗ ಯೋಜನಾ ಪ್ರಬಂಧಕ ಶ್ರೀನಿವಾಸ್ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಮೂರು ತಿಂಗಳಿನಿಂದ ಮನವಿ ಮಾಡಿಕೊಂಡರೂ ಕಂಪೆನಿ ಗ್ರಾ. ಪಂ ವಿನಂತಿಯನ್ನು ಕಡೆಗಣಿಸುತ್ತಿದೆ. ಹಾಗಾಗಿ ಅಧಿಕಾರಿ ಕಚೇರಿಗೆ ಬಾರದಿದ್ದಲ್ಲಿ ಕಚೇರಿಗೆ ಬೀಗ ಜಡಿಯುವುದು ಎಂಬುದಾಗಿ ಅಚಲ ನಿರ್ಧಾರವನ್ನು ಗ್ರಾ. ಪಂ. ಪ್ರಕಟಿಸಿದ ಬಳಿಕ ಯೋಜನಾ ಪ್ರಬಂಧಕ ಶ್ರೀನಿವಾಸ್ ಪಡುಬಿದ್ರಿ ಕಚೇರಿಗಾಗಮಿಸಿದರು.

ತಕ್ಷಣ ಅವರನ್ನು ಅವೈಜ್ಞಾನಿಕ ಕಾಮಗಾರಿಗಳು ನಡೆದಿರುವ ಪಡುಬಿದ್ರಿಯ ವಿವಿದೆಡೆಗಳಿಗೆ ಕರೆದೊಯ್ಯಲಾಯಿತು. ಪರಿಸ್ಥಿತಿಯನ್ನು ಅಧ್ಯಕ್ಷ ರವಿ ಶೆಟ್ಟಿ ಮತ್ತಿತರರು ವಿವರಿಸಿದರು. ತಿಂಗಳೊಳಗೆ ಪರಿಹಾರವನ್ನು ನವಯುಗ ಕಾಮಗಾರಿಗಳಿಂದ ಕಂಡುಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ಸಂಘಟಿಸಲಾಗುವುದೆಂದು ಗ್ರಾಪಂ. ಅಧ್ಯಕ್ಷ ರವಿ ಶೆಟ್ಟಿ ನವಯುಗ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಗ್ರಾ. ಪಂ. ಉಪಾಧ್ಯಕ್ಷೆ ಯಶೋದಾ, ತಾ. ಪಂ. ಮಾಜಿ ಸದಸ್ಯೆ ನೀತಾ ಗುರುರಾಜ್, ಗ್ರಾ.ಪಂ. ಸದಸ್ಯರಾದ ನವೀನ್ ಶೆಟ್ಟಿ, ಗಣೇಶ್ ಕೋಟ್ಯಾನ್ ಸಹಿತ ಎಲ್ಲಾ 32 ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

11 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

11 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

11 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago