Featured

5 ಕೋಟಿ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಾಟ ; ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ – Vishwanews24

ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪಕ್ಷದ ಹೊಸ ಘೋಷ ವಾಕ್ಯವನ್ನು ಬಿಡುಗಡೆಗೊಳಿಸಿ ಚುನಾವಣಾ ಕಣಕ್ಕೆ ಅಧಿಕೃತವಾಗಿ ಬಿ.ಜೆ.ಪಿ. ಚಾಲನೆ ನೀಡಿತ್ತು.
ಕಮಲ ಪಕ್ಷವು ಅದರ ಮುಂದುವರಿದ ಭಾಗವಾಗಿ ಮಂಗಳವಾರದಂದು ‘ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ ನೀಡಿದೆ. ಸರಿಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ದೇಶಾದ್ಯಂತ ಸುಮಾರು 5 ಕೋಟಿ ಮನೆಗಳಲ್ಲಿ ಪಕ್ಷದ ಬಾವುಟವನ್ನು ಹಾರಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ..
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿರುವ ತನ್ನ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಮತ್ತು ಸ್ಟಿಕ್ಕರ್ ಅಂಟಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಡಿಟೋರಿಯಂನಲ್ಲಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ, ಈ ಸಂದರ್ಭದಲ್ಲಿ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನರೇಂದ್ರ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪಕ್ಷದ ಬಾವುಟಗಳನ್ನು ಹಾರಿಸಿ ಬಳಿಕ ಅವುಗಳ ಫೊಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅಮಿತ್ ಶಾ ಅವರು ಮನವಿ ಮಾಡಿಕೊಂಡಿರುವ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಪಕ್ಷ ಬಿಡುಗಡೆಗೊಳಿಸಿದೆ. ಈ ರಾಷ್ಟ್ರವ್ಯಾಪಿ ಅಭಿಯಾನವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು ಮಾರ್ಚ್ 2ರಂದು ಅಂತ್ಯಗೊಳ್ಳಲಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago