ನವದೆಹಲಿ: ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ಮುಕ್ತಾಯಗೊಂಡ ಇಂಟರ್ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ ಫೆಡರೇಷನ್ (ಐಎಸ್ಎಸ್ಎಫ್) ವರ್ಲ್ಡ್ ಕಪ್ ಅಭಿಯಾನದಲ್ಲಿ 5 ಬಂಗಾರದ ಪದಕಗಳೊಂದಿಗೆ ಭಾರತ ಟೂರ್ನಿಗೆ ವಿದಾಯ ಹೇಳಿದೆ.
ಕ್ರೀಡಾಕೂಟದ ಅಂತಿಮ ದಿನವಾದ ಮಂಗಳವಾರ ಮನು ಬಾರ್ಕರ್ ಮತ್ತು ಸೌರಭ್ ಚೌಧರಿ 10 ಮೀಟರ್ ಏರ್ ಪಿಸ್ತೂಲ್ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಹತ್ತು ಮೀಟರ್ ಏರ್ ರೈಫಲ್ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಆಗಿರುವ ಅಪೂರ್ವಿ ಚಂಡೇಲಾ, ದೀಪಕ್ ಕುಮಾರ್ ಜೋಡಿ, ಅಂತಿಮ ದಿನ ಮಿಶ್ರ ಡಬಲ್ಸ್ ಏರ್ ರೈಫಲ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದರು. ಇತರ ವಿಭಾಗದಲ್ಲಿ ಸ್ಪರ್ಧಿಸಿದ್ದ ಯಶಸ್ವಿನಿ ದೇಸ್ವಾಲ್ ಮತ್ತು ಅಭಿಷೇಕ್ ವರ್ಮಾ ಬೆಳ್ಳಿ ಪದಕಗಳಿಗೆ ತೃಪ್ತಿಪಟ್ಟರು.
ಭಾರತ ಈ ಟೂರ್ನಿಯಲ್ಲಿ ಐದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿದೆ. ಈ ಮೂಲಕ ಐಎಸ್ಎಸ್ಎಫ್ ಸೀನಿಯರ್ ವರ್ಲ್ಡ್ ಕಪ್ ಸೇರಿದಂತೆ 2019ರಲ್ಲಿ ನಡೆದ ಐಎಸ್ಎಸ್ಎಫ್ನ ನಾಲ್ಕು ಟೂರ್ನಿಗಳಲ್ಲಿ 16 ಚಿನ್ನ, 4 ಬೆಳ್ಳಿ ಹಾಗೂ 2 ಕಂಚು ಸೇರಿ 22 ಪದಕಗಳೊಂದಿಗೆ ಭಾರತ ಐಎಸ್ಎಸ್ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…