Featured

5 ಬಂಗಾರದ ಪದಕಗಳೊಂದಿಗೆ ಐಎಸ್ಎಸ್​ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಭಾರತ -Vishwanews24

ನವದೆಹಲಿ: ಬ್ರೆಜಿಲ್​ನ ರಿಯೋ ಡಿ ಜನೈರೋದಲ್ಲಿ ಮುಕ್ತಾಯಗೊಂಡ ಇಂಟರ್​​ನ್ಯಾಷನಲ್ ಶೂಟಿಂಗ್ ಸ್ಪೋರ್ಟ್​ ಫೆಡರೇಷನ್ (ಐಎಸ್ಎಸ್​ಎಫ್) ವರ್ಲ್ಡ್ ಕಪ್ ಅಭಿಯಾನದಲ್ಲಿ 5 ಬಂಗಾರದ ಪದಕಗಳೊಂದಿಗೆ ಭಾರತ ಟೂರ್ನಿಗೆ ವಿದಾಯ ಹೇಳಿದೆ.

ಕ್ರೀಡಾಕೂಟದ ಅಂತಿಮ ದಿನವಾದ ಮಂಗಳವಾರ ಮನು ಬಾರ್ಕರ್ ಮತ್ತು ಸೌರಭ್ ಚೌಧರಿ 10 ಮೀಟರ್ ಏರ್ ಪಿಸ್ತೂಲ್​​ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಹತ್ತು ಮೀಟರ್ ಏರ್​ ರೈಫಲ್ ವಿಭಾಗದಲ್ಲಿ ವಿಶ್ವದ ನಂಬರ್​ ಒನ್ ಆಗಿರುವ ಅಪೂರ್ವಿ ಚಂಡೇಲಾ, ದೀಪಕ್ ಕುಮಾರ್ ಜೋಡಿ, ಅಂತಿಮ ದಿನ ಮಿಶ್ರ ಡಬಲ್ಸ್​ ಏರ್​ ರೈಫಲ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದರು. ಇತರ ವಿಭಾಗದಲ್ಲಿ ಸ್ಪರ್ಧಿಸಿದ್ದ ಯಶಸ್ವಿನಿ ದೇಸ್ವಾಲ್ ಮತ್ತು ಅಭಿಷೇಕ್ ವರ್ಮಾ ಬೆಳ್ಳಿ ಪದಕಗಳಿಗೆ ತೃಪ್ತಿಪಟ್ಟರು.

ಭಾರತ ಈ ಟೂರ್ನಿಯಲ್ಲಿ ಐದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿದೆ.  ಈ ಮೂಲಕ ಐಎಸ್​ಎಸ್​ಎಫ್ ಸೀನಿಯರ್ ವರ್ಲ್ಡ್ ಕಪ್ ಸೇರಿದಂತೆ 2019ರಲ್ಲಿ ನಡೆದ ಐಎಸ್​ಎಸ್​ಎಫ್​​ನ ನಾಲ್ಕು ಟೂರ್ನಿಗಳಲ್ಲಿ 16 ಚಿನ್ನ, 4 ಬೆಳ್ಳಿ ಹಾಗೂ 2 ಕಂಚು ಸೇರಿ 22 ಪದಕಗಳೊಂದಿಗೆ ಭಾರತ ಐಎಸ್ಎಸ್​ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago