Featured

5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು  : ಹೈಕೋರ್ಟ್ ಮಹತ್ವದ ತೀರ್ಪು – Vishwanews24

5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು  : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: 5 ಮತ್ತು 8ನೇ ತರಗತಿ ಮಕ್ಕಳಿಗೆ ರಾಜ್ಯ ಶಿಕ್ಷಣ ಇಲಾಖೆ ನಡೆಸಲು ನಿರ್ಧರಿಸಲಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಅನುದಾನ‌ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ.

ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರ ಬಿದ್ದಿದೆ. ಈ ಮೂಲಕ ಸದ್ಯ 5 ಮತ್ತು 8ನೇ ತರಗತಿ ಮಕ್ಕಳಿಗೆ ಇದ್ದ ಪಬ್ಲಿಕ್‌ ಎಕ್ಸಾಂ ಆತಂಕ ದೂರವಾಗಿದೆ. ಅರ್ಜಿದಾರರ ಪರವಾಗಿ ವಕೀಲ ಕೆ.ವಿ.ಧನಂಜಯ್ ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ವಾದಿಸಿದರು. ಈ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಜೊತೆಗೆ ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಸೂಚನೆ ನೀಡಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

4 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

4 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

5 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

5 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

6 hours ago