Featured

5 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳಲ್ಲಿ ಸಚಿವೆ ಶೋಭಾ ಕರಂದ್ಲಾಜೆಗೆ ಸ್ಥಾನ -Vishwanews24

5 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳಲ್ಲಿ ಸಚಿವೆ ಶೋಭಾ ಕರಂದ್ಲಾಜೆಗೆ ಸ್ಥಾನ -Vishwanews24

ನವದೆಹಲಿ : ಮುಂದಿನ ವರ್ಷ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳೂ ತಯಾರಿ ನಡೆಸುತ್ತಿದ್ದು ಬಿಜೆಪಿ ಕೂಡ ತಯಾರಿ ಪ್ರಾರಂಭಿಸಿ ಐದು ರಾಜ್ಯಗಳ ಉಸ್ತುವಾರಿಗಳ ಹೆಸರನ್ನು ಬುಧವಾರ ಪ್ರಕಟಿಸಿದೆ.

ಉತ್ತರ ಪ್ರದೇಶದ ಉಸ್ತುವಾರಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಲಾಗಿದ್ದು, ಧರ್ಮೇಂದ್ರ ಪ್ರಧಾನ್ ಸೇರಿದಂತೆ 8 ಕೇಂದ್ರ ಸಚಿವರಿಗೆ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನೀಡಲಾಗಿದೆ.

ಇನ್ನು ಪ್ರಧಾನ್ ಅವರು ಮುಖ್ಯ ಉಸ್ತುವಾರಿಯಾಗಿರಲಿದ್ದಾರೆ. ಅವರ ಜೊತೆ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಸರೋಜ್ ಪಾಂಡೆ, ಶೋಭಾ ಕರಂದ್ಲಾಜೆ, ಕ್ಯಾಪ್ಟನ್ ಅಭಿಮನ್ಯು, ಅನ್ನಪೂರ್ಣ ದೇವಿ ಮತ್ತು ವಿವೇಕ್ ಠಾಕೂರ್ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಪಂಜಾಬ್ ಜವಾಬ್ದಾರಿಯನ್ನು ಕ್ಯಾಬಿನೆಟ್ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲಾಗಿದ್ದು, ಪಂಜಾಬಿನಲ್ಲಿ, ಶೆಖಾವತ್ ಜೊತೆ ಹರ್ದೀಪ್ ಪುರಿ, ಮೀನಾಕ್ಷಿ ಲೇಖಿ, ವಿನೋದ್ ಚಾವ್ಡಾ ಇರಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಾಖಂಡದ ಮುಖ್ಯ ಉಸ್ತುವಾರಿ ವಹಿಸಲಿದ್ದಾರೆ.

ಲಾಕೆಟ್ ಚಟರ್ಜಿ ಮತ್ತು ಸರ್ದಾರ್ ಆರ್ ಪಿ ಸಿಂಗ್ ಅವರು ಕೂಡ ಪ್ರಭಾರಿ ಪಾತ್ರ ವಹಿಸಲಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೋವಾ ಉಸ್ತುವಾರಿ ವಹಿಸಿಕೊಂಡಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮಣಿಪುರದ ಉಸ್ತುವಾರಿ ಹೊರಲಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago