ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆ ಮೂಲಕ 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್ ಹಾಕಿದೆ.
1ನೇ ತರಗತಿ ಸೇರುವ ಮಕ್ಕಳ ವಯೋಮಿತಿ ಸಡಿಲಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ ಸೇರಲು 6 ವರ್ಷ ನಿಯಮ ಕಡ್ಡಾಯ ಎಂದು ತಿಳಿಸಿದರು.
ಎಸ್‌ಇಪಿ ಅವರಿಂದ ವರದಿ ಕೇಳಿದ್ವಿ. ಅವರು ಮೊದಲು 6 ವರ್ಷ ಅಂತ ಹೇಳಿದ್ರು. ಆಮೇಲೆ ನಮ್ಮ ಇಲಾಖೆ ಅವರ ಜೊತೆ ಮಾತಾಡಿದ್ವಿ. ಎಸ್‌ಇಪಿ ಸೂಚನೆ ಮೇಲೆ 5 ವರ್ಷ 5 ತಿಂಗಳು ಆಗಿದ್ದರೆ ದಾಖಲಾತಿ ಮಾಡಬೇಕು. ಸಮೀಕ್ಷೆಗೆ ತಂತ್ರಜ್ಞಾನ ಬಳಕೆ ಮಾಡಿ ಮತ್ತೆ ಮಾಡಲಿ ಎಂದರು.
ಯುಕೆಜಿ ಮುಗಿಸಿರಬೇಕು. 1ನೇ ತರಗತಿಗೆ 5 ವರ್ಷ 5 ತಿಂಗಳು ದಾಖಲಾತಿ ಮಿತಿ ಸಡಿಲಿಕೆ ಮಾಡಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.
ವಯೋಮಿತಿ ಸಡಿಲ ಮಾಡುವುದಕ್ಕೆ ಎಲ್ಲರೂ ಒತ್ತಡ ಹಾಕಿದ್ದರು. ಮಕ್ಕಳನ್ನ ಮಿಷನ್ ರೀತಿ ಓದಿಸೋಕೆ ಪೋಷಕರು ಮುಂದಾಗಬಾರದು. ಮಕ್ಕಳಿಗೆ ಒತ್ತಡ ಹಾಕುವುದು ಸರಿಯಲ್ಲ. ಒತ್ತಡ ಇಲ್ಲದೆ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…