Featured

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ – Vishwanews24

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು11 ನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ .ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಈ ವೇಳೆ ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.ಆದರೆ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago