ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಈ ಹಿಂದೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಮಾ. 22 ರಂದು ನ್ಯಾ. ಕೆ.ಸೋಮಶೇಖರ್ ಹಾಗೂ ನ್ಯಾ. ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.
ಯಾವುದೇ ಶಾಲೆಗಳು ಕೂಡ ಫಲಿತಾಂಶವನ್ನು ಪ್ರಕಟಿಸಬಾರದು. ಫಲಿತಾಂಶ ಪ್ರಕಟಣೆಗೆ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸುವಂತೆ ಸೂಚಿಸಿತ್ತು. ಹೈಕೋರ್ಟ್ ನ ಸೂಚನೆಯಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದವು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಳಿಸುವ ಸಂದರ್ಭದಲ್ಲು ಸುಪ್ರೀಂ ತಡೆಯಾಜ್ಞೆ ನೀಡಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…