Featured

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ – Vishwanews24

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಈ ಹಿಂದೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಮಾ. 22 ರಂದು ನ್ಯಾ. ಕೆ.ಸೋಮಶೇಖರ್ ಹಾಗೂ ನ್ಯಾ. ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಯಾವುದೇ ಶಾಲೆಗಳು ಕೂಡ ಫಲಿತಾಂಶವನ್ನು ಪ್ರಕಟಿಸಬಾರದು. ಫಲಿತಾಂಶ ಪ್ರಕಟಣೆಗೆ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸುವಂತೆ ಸೂಚಿಸಿತ್ತು. ಹೈಕೋರ್ಟ್ ನ ಸೂಚನೆಯಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದವು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಳಿಸುವ ಸಂದರ್ಭದಲ್ಲು ಸುಪ್ರೀಂ ತಡೆಯಾಜ್ಞೆ ನೀಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago