5 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆ ಮಾಡುತ್ತೇನೆ ಎಂದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿ.. -Vishwanews24
5 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆ ಮಾಡುತ್ತೇನೆ ಎಂದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿ -Vishwanews24
ಚೆನ್ನೈ: ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿಯನ್ನು ಸತ್ಯ ಆನಂದಂ(43) ಎಂದು ಗುರುತಿಸಲಾಗಿದೆ. ಈತ ಆರ್ಯಂಕುಪ್ಪಂ ಗ್ರಾಮದ ನಿವಾಸಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಎಂದು ಪೊಲೀಸರು ತಿಳಿಸಿದ್ದಾರೆ.
ಸರಕಾರದ ಕೃಷಿ ನೀತಿಯ ಬಗ್ಗೆ ಅಪಪ್ರಚಾರ ಸಲ್ಲದು: ದ.ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ -Vishwanews24
ಪುದುಚೇರಿಯ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿದ್ದ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ, ಯಾರಾದರೂ 5 ಕೋಟಿ ರೂ ಕೊಟ್ಟರೆ ಮೋದಿಯ ಕೊಲೆ ಮಾಡುವುದಾಗಿ ಘೋಷಣೆ ಮಾಡಿದ್ದ. ಈ ಪೋಸ್ಟ್ ನೋಡಿ ಕಾರು ಚಾಲಕನೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದ.
ಇತ್ತ ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ ಖಾತೆಯ ಮೂಲ ಪರಿಶೀಲಿಸಿ ಆತನ ಜಾಡು ಪತ್ತೆ ಮಾಡಿ ಬಂಧಿಸಿದ್ದಾರೆ.
ಸತ್ಯ ಆನಂದಂ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 505 (1) ಮತ್ತು 505 (2) (ಸಾರ್ವಜನಿಕ ಕಿಡಿಗೇಡಿತನಗಳಿಗೆ ಕಾರಣವಾಗುವ ಹೇಳಿಕೆಗಳನ್ನು ನೀಡುವುದು ಮತ್ತು ವರ್ಗಗಳ ನಡುವೆ ದ್ವೇಷ, ಉತ್ತೇಜಿಸುವ ಹೇಳಿಕೆಗಳು) ಇದರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಉಡುಪಿ :ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಟೆಂಡರ್ ಪ್ರಕ್ರಿಯೆ -Vishwanews24
