5 ವರ್ಷ ನಾನೇ ಸಿಎಂ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ – vishwanews24
5 ವರ್ಷ ನಾನೇ ಸಿಎಂ : ಬಹಳ ಸಂತೋಷ , ಯಾರು ಇಲ್ಲ ಅಂತ ಹೇಳಿದವರು? : ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ
ಬೆಂಗಳೂರು: ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕೆಲ ಶಾಸಕರು ದೆಹಲಿಗೆ ಭೇಟಿ ನೀಡಿರುವ ವಿಚಾರವಾಗಿ ಮಾತನಾಡಿದ್ದಾರೆ. ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ. ನನ್ನ ಆರೋಗ್ಯವೂ ಸರಿಯಿಲ್ಲ ಅಂತ ಹೇಳಿದ್ದಾರೆ.
ಅಲ್ಲದೇ ಮೈಸೂರಿನಲ್ಲಿ ನಾನೇ 5 ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಹಳ ಸಂತೋಷ. ಯಾರು ಇಲ್ಲ ಅಂತ ಹೇಳಿದವರು? ಅವರು ಸಿಎಂ ಆಗಿರಲ್ಲ ಅಂತ ಯಾರೂ ಪ್ರಶ್ನಿಸಿಲ್ಲ. ನಮ್ಮ ಪಕ್ಷ ಅವರಿಗೆ ಸಿಎಂ ಆಗಿ ಜವಬ್ದಾರಿ ಕೊಟ್ಟಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ ಅಂತ ಹೇಳಿದ್ದಾರೆ.
ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ – vishwanews24
