6 ರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಕೋವಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ – Vishwanews24

Featured, ರಾಷ್ಟ್ರ ನ್ಯೂಸ್

ದೇಶದ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ..

ಶಾಲೆಗೆ ಹೋಗುವ ಪುಟ್ಟ ಮಕ್ಕಳಿಗೆ ಈ ಲಸಿಕೆಯೂ ಪ್ರಯೋಜನಕಾರಿ..

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) 6 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ತುರ್ತು ಬಳಕೆಗಾಗಿ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿಸಿದೆ.

ಇದು ದೇಶದ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಶಾಲೆಗೆ ಹೋಗುವ ಪುಟ್ಟ ಮಕ್ಕಳಿಗೆ ಈ ಲಸಿಕೆಯೂ ಪ್ರಯೋಜನಕಾರಿಯಾಗಿದೆ ಎಂದು ಬಣ್ಣಿಸಲಾಗಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ (DCGI) ನುರಿತ ತಜ್ಞರ ಸಮಿತಿಯು (SEC) ಭಾರತ್ ಬಯೋಟೆಕ್‌ಗೆ ಕೋವಿಡ್ -19 ಲಸಿಕೆ ಕೋವಾಕ್ಸಿನ್ 2-12 ವರ್ಷ ವಯಸ್ಸಿನ ಮಕ್ಕಳಿಗೆ ನೀಡುವುದಕ್ಕಾಗಿ ಹೆಚ್ಚುವರಿ ಡೇಟಾವನ್ನು ಕೇಳಿದ ನಂತರ ಮಹತ್ವದ ಬೆಳವಣಿಗೆ ಇದಾಗಿದೆ.

ಈಗಾಗಲೇ ಕಾರ್ಬೆವಾಕ್ಸ್ ಲಸಿಕೆಯನ್ನು ಪ್ರಸ್ತುತ 12-14 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತಿದೆ. 15-18 ವರ್ಷ ವಯೋಮಾನದ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ಈ ವರ್ಷ ಜನವರಿ 3 ರಂದು ಆರಂಭವಾಗಿದೆ. ಒಟ್ಟಾರೆಯಾಗಿ, ಭಾರತವು ಪ್ರಸ್ತುತ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಎರಡು ಕೋವಿಡ್-19 ಲಸಿಕೆಗಳನ್ನು ನೀಡುತ್ತಿದೆ.

ಉಡುಪಿ : ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಶೀಘ್ರ ಜಾರಿಗೆ ಬರುವಂತಾಗಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ -Vishwanews24

Leave a Reply