ಬೆಳಗಾವಿ: ಇನ್ನು 6 ತಿಂಗಳೊಳಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. 6 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಕಾದು ನೋಡಿ ಎಂದು ಬಿಜೆಪಿ ಮುಖಂಡ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹಿರಣ್ಯಕೇಶಿ ನದಿಯಿಂದ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಬಳಿಕ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯ ಯಾವುದೇ ಶಾಸಕರೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಬಿಜೆಪಿಯ ಯಾವುದೇ ಶಾಸಕರೂ ಸಚಿವ ರಮೇಶ್ ಜಾರಕಿಹೊಳಿ ಸೇರಿ ಯಾವುದೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿಲ್ಲ ಎಂದು ಹೇಳಿದರು.
ಬಜೆಟ್ನಲ್ಲಿ ಸಿಎಂ ಕುಮಾರಸ್ವಾಮಿಯಿಂದ ರೈತರ ಸಾಲಮನ್ನಾ ವಿಚಾರಕ್ಕೆ ಪ್ರತಿಕ್ರಿಯಿಸಿ, ರೈತರ ಬೆಳೆ ಸಾಲವನ್ನು ಮಾತ್ರ ಮುಖ್ಯಮಂತ್ರಿಗಳು ಮನ್ನಾ ಮಾಡುವವರಿದ್ದಾರೆ. ಆದರೆ, ಎಚ್ಡಿಕೆ ಈ ಬಾರಿಯೂ ವಚನ ಭ್ರಷ್ಟ ಆಗದೆ ನುಡಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…