Featured

6 ಮರಿಗಳಿಗೆ ಜನ್ಮ ನೀಡಿದ ಚಾರ್ಲಿ : ಮೈಸೂರಿಗೆ ತೆರಳಿ ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ – Vishwanews24

6 ಮರಿಗಳಿಗೆ ಜನ್ಮ ನೀಡಿದ ಚಾರ್ಲಿ : ಮೈಸೂರಿಗೆ ತೆರಳಿ ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ

ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ಜೊತೆ ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ 6 ಮರಿಗಳಿಗೆ ಜನ್ಮ ನೀಡಿದೆ. ಮೈಸೂರಿಗೆ ತೆರಳಿ ಚಾರ್ಲಿಯನ್ನು ಭೇಟಿಯಾಗಿ ಈ ಖುಷಿಯ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

2022ರಲ್ಲಿ ಬಿಡುಗಡೆಯಾದ ‘777 ಚಾರ್ಲಿ’ ಚಿತ್ರವು ಪ್ರೇಕ್ಷಕರಿಗೆ ಕನೆಕ್ಟ್ ಆಗಿತ್ತು. ಧರ್ಮ ಮತ್ತು ಚಾರ್ಲಿ ಕಾಂಬಿನೇಷನ್ ನೋಡಿ ಫ್ಯಾನ್ಸ್ ಕಣ್ತುಂಬಿಕೊಂಡಿದ್ದರು. ಅದರಲ್ಲೂ ಕ್ಲೈಮ್ಯಾಕ್ಸ್‌ನಲ್ಲಿ ಚಾರ್ಲಿ ಮರಿಗೆ ಜನ್ಮ ನೀಡಿ ಪ್ರಾಣ ಬಿಡುತ್ತದೆ. ಈ ಸೀನ್ ನೋಡಿ ಪ್ರೇಕ್ಷಕರು ಭಾವುಕರಾಗಿದ್ದರು.

ಇದೀಗ ರಿಯಲ್ ಆಗಿ ಚಾರ್ಲಿ 5 ಹೆಣ್ಣು ಮರಿ, ಒಂದು ಗಂಡು ಮರಿಗೆ ಜನ್ಮ ನೀಡಿದ್ದಾಳೆ. ಚಾರ್ಲಿಯನ್ನು  ನೋಡಲು ರಕ್ಷಿತ್ ಶೆಟ್ಟಿ ಮೈಸೂರಿಗೆ ಭೇಟಿ ಮಾಡಿ ಸಂಭ್ರಮಿಸಿದ್ದಾರೆ. ಚಾರ್ಲಿ ಮತ್ತು ಮರಿಗಳ ವಿಡಿಯೋವನ್ನು ರಕ್ಷಿತ್ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

 

ನಮ್ಮ ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿ 2 ವರ್ಷ ಆಯ್ತು. ಸಿನಿಮಾ ಬಿಡುಗಡೆ ಆದಮೇಲೆ ಚಾರ್ಲಿ ತಾಯಿ ಆಗಬೇಕು. ಅದು ಮರಿಗಳಿಗೆ ಜನ್ಮ ನೀಡಬೇಕು ಎಂಬ ಆಸೆ ನಮಗೆಲ್ಲರಿಗೂ ಇತ್ತು. ಆಗಲೇ ಅವಳ ಜರ್ನಿಗೆ ಒಂದು ಪರಿಪೂರ್ಣತೆ ಸಿಗುತ್ತದೆ ಎಂಬ ಫೀಲಿಂಗ್ ನಮ್ಮ ತಂಡಕ್ಕೆ ಇತ್ತು. ಚಾರ್ಲಿ ತಾಯಿ ಆಗಬೇಕು ಎಂಬುದನ್ನು ನಾನು ತುಂಬ ಸಮಯದಿಂದ ಎದುರು ನೋಡುತ್ತಿದ್ದೆ. ಪ್ರಮೋದ್‌ಗೆ ಫೋನ್ ಮಾಡಿದಾಗೆಲ್ಲಾ, ಇದರ ಬಗ್ಗೆ ಕೇಳ್ತಾ ಇದ್ದೆ. ವಯಸ್ಸಾಗಿದೆ ಅನುಮಾನ ಅಂತಲೇ ಅವರು ಹೇಳುತ್ತಿದ್ದರು. ಅಚ್ಚರಿ ಎಂದರೆ, ಮೇ 9ರಂದು 6 ಪಪ್ಪಿಗಳಿಗೆ ಜನ್ಮ ನೀಡಿದ್ದಾಳೆ ಚಾರ್ಲಿ. ಅವುಗಳನ್ನು ನೋಡುವುದಕ್ಕಾಗಿ ಮೈಸೂರಿಗೆ ಬಂದಿದ್ದೇನೆ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಇವತ್ತಿಗೂ ಎಲ್ಲರೂ ‘777 ಚಾರ್ಲಿ’ ಸಿನಿಮಾವನ್ನು ತುಂಬ ಪ್ರೀತಿ ಮಾಡುತ್ತಿದ್ದೀರಿ. ನಾನು ಎಲ್ಲೇ ಹೋದರೂ ಚಾರ್ಲಿ (Charlie) ಬಗ್ಗೆಯೇ ಎಲ್ಲರೂ ಮಾತಾಡುತ್ತಿದ್ದಾರೆ. ಅದರಲ್ಲೂ ಮಕ್ಕಳು ಈ ಸಿನಿಮಾವನ್ನು ತುಂಬ ಇಷ್ಟಪಟ್ಟಿದ್ದಾರೆ. ನಿಮ್ಮ ಪ್ರೀತಿ ಚಾರ್ಲಿ ಮೇಲೆ ಸದಾ ಹೀಗೆ ಇರಲಿ ಎಂದು ನಟ ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago