Featured

6 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ : ಆರೋಪಿಯ ಶವ ರೈಲ್ವೇ ಹಳಿ ಮೇಲೆ ಪತ್ತೆ -Vishwanews24

6 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ : ಆರೋಪಿಯ ಶವ ರೈಲ್ವೇ ಹಳಿ ಮೇಲೆ ಪತ್ತೆ -Vishwanews24

ಹೈದರಾಬಾದ್ : ಇತ್ತೀಚಿಗೆ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿ ಪಲ್ಲಂಕೊಂಡ ರಾಜು ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.

ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ರಾಜು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೂಲಗಳು ಮಾಹಿತಿ ನೀಡಿದ್ದು, ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್‌ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯಾಗಿದ್ದ ಪಲಕೊಂಡ ರಾಜು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದ ರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು.

ಈ ಮಧ್ಯೆ, ತೆಲಂಗಾಣ ಕಾರ್ಮಿಕ ಸಚಿವ ಚಿ ಮಲ್ಲಾರೆಡ್ಡಿ ಮಂಗಳವಾರ ಆರೋಪಿಯನ್ನು “ಎನ್ ಕೌಂಟರ್” ಮಾಡುವಂತೆ ಒತ್ತಾಯಿಸಿದ್ದಾರೆ ಹೈದರಾಬಾದ್ ಪೊಲೀಸರು, ಆರೋಪಿ ಚಿತ್ರವನ್ನು ಬಿಡುಗಡೆ ಮಾಡಿ, ಆತನ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago