ಹೈದರಾಬಾದ್ : ಇತ್ತೀಚಿಗೆ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿ ಪಲ್ಲಂಕೊಂಡ ರಾಜು ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.
ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ರಾಜು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೂಲಗಳು ಮಾಹಿತಿ ನೀಡಿದ್ದು, ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 9 ರ ಗುರುವಾರದಂದು ಹೈದರಾಬಾದ್‌ನ ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯಾಗಿದ್ದ ಪಲಕೊಂಡ ರಾಜು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದ ರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್‌ಶೀಟ್‌ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು.
ಈ ಮಧ್ಯೆ, ತೆಲಂಗಾಣ ಕಾರ್ಮಿಕ ಸಚಿವ ಚಿ ಮಲ್ಲಾರೆಡ್ಡಿ ಮಂಗಳವಾರ ಆರೋಪಿಯನ್ನು “ಎನ್ ಕೌಂಟರ್” ಮಾಡುವಂತೆ ಒತ್ತಾಯಿಸಿದ್ದಾರೆ ಹೈದರಾಬಾದ್ ಪೊಲೀಸರು, ಆರೋಪಿ ಚಿತ್ರವನ್ನು ಬಿಡುಗಡೆ ಮಾಡಿ, ಆತನ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…