ಬೆಂಗಳೂರು: 6 ವರ್ಷದ ಮೊಮ್ಮಗಳ ಮೇಲೆ ಆಕೆಯ ತಾತನೇ ಅತ್ಯಾಚಾರವೆಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ತಂದೆ ರಂಜಿತ್ ಕುಮಾರ್‌ನನ್ನು (35) ಬಂಧಿಸಲಾಗಿದೆ. ಆರೋಪಿಗಳು ಮೂಲತಃ ತಮಿಳುನಾಡು ಮೂಲದವರಾಗಿದ್ದು, ಪ್ರಸ್ತುತ ಹುಳಿಮಾವು ಸಮೀಪ ವೇಣುಗೋಪಾಲ್ ನಗರದ ನಿವಾಸಿಯಾಗಿದ್ದರು. ರಂಜಿತ್ ಕುಮಾರ್ ತಂದೆ ಚಕ್ರವರ್ತಿ (60), ಅತ್ತೆ ವಿಜಯಮ್ಮ (50) ಹಾಗೂ ಇಬ್ಬರು ಸಹೋದರರು ತಲೆಮರೆಸಿಕೊಂಡಿದ್ದಾರೆ.
ತಂದೆ ರಂಜಿತ್ ಕುಮಾರ್ ಅಜ್ಜಿ, ಚಿಕ್ಕಂಪ್ಪದಿರು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ ಎನ್ನಲಾಗಿದೆ. ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಯಾರಿಗೂ ಹೇಳಿದಂತೆ ತಾಯಿಯ ಬಳಿ ತಂದೆ, ಅತ್ತೆ, ಮಾವ ಹಾಗೂ ಚಿಕ್ಕಪ್ಪಂದಿರು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ, ಚಿನ್ನದ ಒಡವೆ ಕೊಡಿಸುತ್ತೇವೆ, ವಿಷಯ ಯಾರಿಗೂ ಗೊತ್ತಾಗಬಾರದು ಎಂದು ಧಮ್ಕಿ ಕೂಡ ಹಾಕಿದ್ದಾರೆ. ಬಳಿಕ ತಾಯಿ ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹುಳಿಮಾವು ಪೊಲೀಸ್ ಠಾಣೆಗೆ ಬಂದು ಘಟನೆಯ ಬಗ್ಗೆ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿ ಚಕ್ರವರ್ತಿ, ಅತ್ತೆ ವಿಜಯಮ್ಮ ಹಾಗೂ ಇಬ್ಬರು ಸಹೋದರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂತ್ರಸ್ತ ಬಾಲಕಿ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…