ಬೆಂಗಳೂರು: 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.
ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ. ಜೊತೆಗೆ ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
ಮಕ್ಕಳನ್ನು ಶಾಲೆಗೆ ಬಿಡಲು ಬರುವ ಪೋಷಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.
ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳಲಾಗುತ್ತದೆ. ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್ ಮಾಡಲು ಟ್ರಾಫಿಕ್ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…