6/1/2020.ರಂದು ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ ಉಪವಾಸದ ವೈಜ್ಞಾನಿಕ ಸತ್ಯ: ಗಣಪತಿ ಭಟ್ 8088827292

6/1/2020.ರಂದು ವೈಕುಂಠ ಏಕಾದಶಿ
**********************************

ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ
ಉಪವಾಸದ ವೈಜ್ಞಾನಿಕ ಸತ್ಯ….!

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ.
ಒಂದು “ವೈಕುಂಠ”,
ಎರಡನೆಯದು ಏಕಾದಶಿ,
ಮೊದಲು ಇವುಗಳ ಸ್ಥೂಲ ಅರ್ಥ :
“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

ಇನ್ನು “ಏಕಾದಶಿ” ಎಂದರೆ ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು.
“ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.
ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.

ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ. ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :

ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.

ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.
ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.

ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.

ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.

ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ. ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.

ನಂದಗೋಪನಿಗೆ ಪರಮಾನಂದವಾಯಿತು. ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜರೂಫ ಅರಿಯಲಾರೆವು ಎಂದು ಪರಿತಪಿಸಿದರು.

ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು, ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.
ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು.
ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.

ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು. ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು

ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ ದೈವಶಕ್ತಿ ಜ್ಯೋತಿಷ್ಯರು.ಶ್ರೀ ಗಣಪತಿ ಭಟ್ ಗುರೂಜಿ, ಮೊ: 8088827292 ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ ಹೀನಾಯ ತೊಂದರೆ, ವಶೀಕರಣ, ಜೂಜಾಟದಲ್ಲಿ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರದಲ್ಲಿ ಅಭಿವೃದ್ಧಿ, ಗ್ರಹಗಳ ಗೋಚಾರ ಫಲ, ವಾಸ್ತು ದೋಷ, ಶಕುನ ದೋಷ, ದಾಟಿದ ದೋಷ, ಅನಾರೋಗ್ಯ ತೊಂದರೆ, ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲ ಮತ್ತು ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago