ನವದೆಹಲಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭಕೋರಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, “ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.
“ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …