ಮಡಿಕೇರಿ, : ಭೀಕರ ಜಲ ಪ್ರವಾಹದಿಂದ ತತ್ತರಿಸಿಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದ್ದು, ಸಾಕು ಪ್ರಾಣಿಗಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಪ್ರಾಣಿ ದಯಾ ಸಂಘಟನೆಗಳು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಕಾರ್ಯಕರ್ತರು ಸಾಕು ಪ್ರಾಣಿಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಮಡಿಕೇರಿ ತಾಲೂಕಿನಲ್ಲಿ ಪವಾಡ ಸದೃಶ ಘಟನೆಯೊಂದು ನಡೆದಿದೆ.
ಮಡಿಕೇರಿ ತಾಲೂಕಿನ ಕಾಲೂರು ಎಂಬ ಪುಟ್ಟ ಗ್ರಾಮದಲ್ಲಿ ಬೆಟ್ಟ ಕುಸಿದು ಗೋಮಾತೆಯೊಂದು ಕಳೆದ 7 ದಿನಗಳಿಂದ ಮಣ್ಣಿನಡಿ ಸಿಲುಕಿತ್ತು. ಮಾತ್ರವಲ್ಲ, ಗೋವು ಕೆಸರಿನಲ್ಲಿ ಹೂತು ಹೋಗಿತ್ತು. ಆದರೆ ಇದೀಗ ಮಣ್ಣಿನಲ್ಲಿ 7 ದಿನಗಳಿಂದ ಹೂತು ಹೋಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಮಾತೆ ಗೋವಿನ ರಕ್ಷಣೆಯನ್ನು ಮಾಡಿ ಮರುಜೀವ ನೀಡಲಾಗಿದೆ.
ಬೆಟ್ಟ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿತ್ತು. ಮಣ್ಣಿನ ರಾಶಿಯಲ್ಲಿ ಹಸುವಿನ ತಲೆ ಮಾತ್ರ ಕಾಣಿಸುತ್ತಿತ್ತು. ಹುಲ್ಲು, ನೀರು, ಆಹಾರ ಯಾವುದು ಇಲ್ಲದೇ ಕೇವಲ ಕಣ್ಣು ಮಾತ್ರ ಮಿಟುಕಿಸುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಾತೆ ಗೋವನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವ ಹಸುವಿಗೆ ಚಿಕಿತ್ಸೆ ನೀಡಿ, ನೋಡಿಕೊಳ್ಳುತ್ತಿದ್ದಾರೆ.
ನಡುಗಡ್ಡೆಯಂತಾಗಿರುವ ಕೊಡಗಿನಲ್ಲಿ ಗುಡ್ಡಗಳು, ಮುರಿದು ಬಿದ್ದಿರುವ ಮನೆಗಳು, ಕೆಸರಿನಲ್ಲಿ ಸಿಲುಕಿದ್ದ ಪ್ರಾಣಿಗಳ ರಕ್ಷಣೆಯ ಕಾರ್ಯ ಭರದಿಂದ ನಡೆಯುತ್ತಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…