Featured

70ನೇ ಗಣರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ವಜುಭಾಯಿ ವಾಲಾ – Vishwanews24

ಬೆಂಗಳೂರು : ದೇಶಾದ್ಯಂತ ಇಂದು 70 ನೇ ಗಣರಾಜ್ಯೋತ್ಸವ ಸಂಭ್ರಮ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ತೆರೆದ ಜೀಪಿನಲ್ಲಿ ಸಂಚರಿಸಿ ಗೌರವ ರಕ್ಷಣೆಯನ್ನು ಸ್ವೀಕರಿಸಿದರು.

ಬಳಿಕ ಮಾನತಾಡಿದ ಅವರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಇಂದು ರಾಷ್ಟ್ರ, ಸಾರ್ವಭೌಮತ್ವವನ್ನು ಕೊಂಡಾಡುವ ದಿನ. ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು. ನಮ್ಮ ದೇಶ ಸಂವಿಧಾನ ರಚಿತವಾಗಿ ಗಣರಾಜ್ಯವಾಯಿತು. ನಮ್ಮ ರಾಜ್ಯ ಅನೇಕ ಸವಾಲುಗಳನ್ನು ಮೆಟ್ಟಿನಿಂತು ಬೆಳೆದಿದೆ. ಕೊಡಗು ಮತ್ತು ಮಲೆನಾಡು ಭಾಗದಲ್ಲಿ ಪ್ರಾಕೃತಿಕ ವಿಕೋಪವಾಗಿತ್ತು. ಕೇಂದ್ರ ಮತ್ತು ರಾಜ್ಯದ ಸಹಯೋಗದೊಂದಿಗೆ ತುರ್ತು ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಬಡವರ ಬಂಧು ಯೋಜನೆಯ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಕೊಡಲಾಗಿದೆ. ಸಹಕಾರಿ ಬ್ಯಾಂಕ್ ಗಳು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಯೋಜನೆ ಜಾರಿ ಮಾಡಲಾಗಿದೆ. 20 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿಗಳ ಮನೆ ನಿರ್ಮಾಣ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

 

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago