Featured

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

72ನೇ ಗಣರಾಜ್ಯೋತ್ಸವ : ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ -Vishwanews24

ನವದೆಹಲಿ : ಭಾರತದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ಅನೇಕ ದೇಶಗಳ ಗಣ್ಯರು ಭಾರತದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯನ್ನಾಗಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬ್ರಿಟನ್‌ನಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯ ಪ್ರಭಾವ ಹೆಚ್ಚಾದ ಕಾರಣ ಬೋರಿಸ್ ಜಾನ್ಸನ್ ಅವರು ತಮ್ಮ ಪ್ರವಾಸ ರದ್ದುಗೊಳಿಸಿದ್ದರು. ಹೀಗಾಗಿ ಸಮಾರಂಭಕ್ಕೆ ಗೈರು ಹಾಜರಾದರೂ ಅವರು ಭಾರತಕ್ಕೆ ಸಂದೇಶ ರವಾನಿಸಿದ್ದಾರೆ.

‘ಇಂದು ಭಾರತವು ಗಣರಾಜ್ಯೋತ್ಸವ ದಿನ ಆಚರಿಸುತ್ತಿದೆ. ಭಾರತ ವಿಶ್ವದ ಅತಿದೊಡ್ಡ ಸಾರ್ವಭೌಮ ಪ್ರಜಾಪ್ರಭುತ್ವದ ದೇಶವಾಗಿದ್ದು, ಅಸಾಧಾರಣ ಸಂವಿಧಾನವನ್ನು ಹೊಂದಿದೆ. ನನ್ನ ಹೃದಯಕ್ಕೆ ಹತ್ತಿರವಾಗಿರುವ ದೇಶಕ್ಕೆ ನನ್ನ ಪ್ರಾಮಾಣಿಕ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಅವರು ಹೇಳಿದ್ದಾರೆ.

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಈ ವರ್ಷ ಮುಂದಿನ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲು ಕಾತರನಾಗಿದ್ದೇನೆ. ನಾನು ಮತ್ತು ಪ್ರಧಾನಿ ನರೇಂದ್ರ ಮೋದಿ ಒಬ್ಬರೂ ಪ್ರತಿಜ್ಞೆಗೈದಿರುವಂತೆ ನಮ್ಮ ಸ್ನೇಹ ಮತ್ತು ಸಂಬಂಧವನ್ನು ಬಲಪಡಿಸುವ, ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಬೋರಿಸ್ ಜಾನ್ಸನ್ ಹೇಳಿದ್ದಾರೆ.

ನಮ್ಮ ಎರಡು ದೇಶಗಳು ಈ ಪಿಡುಗಿನಿಂದ ಮನುಕುಲವನ್ನು ಮುಕ್ತಗೊಳಿಸಲು ಲಸಿಕೆಯ ಅಭಿವೃದ್ಧಿ, ಉತ್ಪಾದನೆ ಮತ್ತು ಹಂಚಿಕೆಗಳ ವಿಚಾರದಲ್ಲಿ ಜತೆಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ಬ್ರಿಟನ್, ಭಾರತ ಮತ್ತು ಇತರೆ ದೇಶಗಳ ಸಂಯೋಜಿತ ಪ್ರಯತ್ನದ ಫಲವಾಗಿ ನಾವು ಕೋವಿಡ್ ವಿರುದ್ಧ ಯಶಸ್ಸಿನ ಹಾದಿಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago