Featured

72 ನೇ ಗಣರಾಜ್ಯೋತ್ಸವ : ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ -Vishwanews24

72 ನೇ ಗಣರಾಜ್ಯೋತ್ಸವ : ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ -Vishwanews24

70 ವರ್ಷದ ನಾವು ಮಾಡಿರುವ ಸಾಧನೆಯನ್ನ ಪ್ರಪಂಚ ನೋಡಿದೆ..

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಕಾಂಗ್ರೆಸ್ ಭವನದಲ್ಲಿ 72 ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಬಂಡವಾಳಶಾಹಿಗಳ ಪರವಾಗಿ ಬಿಜೆಪಿ ಸರ್ಕಾರ ನಿಂತಿದೆ.ಇದರ ಬಗ್ಗೆ ನಾವು ಧ್ವನಿ ಎತ್ತಬೇಕು. ಸಾಮಾನ್ಯ ಜನರ ಮೇಲೆ ತೆರಿಗೆ ಹೆಚ್ಚಳ ಆಗುತ್ತಿದೆ. ಕೊರೊನಾ ಸಮಯದಲ್ಲಿ ಆದ ತೊಂದರೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಇದರ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿದ್ರೆ ನಮ್ಮ ಬಾಯಿ ಮುಚ್ಚಿಸುವ ಕೆಲಸ ಸರ್ಕಾರ ಮಾಡಿತ್ತು. ಬಣ್ಣದ ಮಾತುಗಳಿಗೆ ನಾವು ಮರಳಾಗಬಾರದು ಎಂದರು. ಏಳು ದಶಕಗಳ ಸಂಭ್ರಮದಲ್ಲಿ ನಾವಿದ್ದೇವೆ. ಸಂವಿಧಾನದ ಮೇಲೆ ನಾವು ನಂಬಿಕೆ ಇಟ್ಟು ಬದುಕುತ್ತಿದ್ದೇವೆ.

ಸಂಘಟನೆ ಇಲ್ಲದಿದ್ದರೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ : ವಿನಯ್‌ ಗುರೂಜಿ -Vishwanews24

ಸ್ವಾತಂತ್ರ್ಯಕ್ಕಾಗಿ ದೇಶದಲ್ಲಿ ಹಲವಾರು ಜಾತಿ, ಧರ್ಮದ ಜನ ಶ್ರಮಿಸಿದ್ದಾರೆ. 72 ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇವೆ. ಚಂದ್ರಯಾನ ಸೇರಿದಂತೆ, ದೇಶದ ಒಳಗೆ, ಗಡಿಯಲ್ಲಿ ದೇಶ ಹಲವಾರು ಸಾಧನೆ ಮಾಡಿದೆ. 70 ವರ್ಷದ ನಾವು ಮಾಡಿರುವ ಸಾಧನೆಯನ್ನ ಪ್ರಪಂಚ ನೋಡಿದೆ. ಪ್ರತಿದಿನ ಸ್ವಾತಂತ್ರ್ಯದ ಬಗ್ಗೆ ಮಾತಾಡಬೇಕು. ಪ್ರತಿದಿನ ಮಕ್ಕಳಿಗೆ ದೇಶಾಭಿಮಾನದ ಬಗ್ಗೆ ಅರಿವು ಮೂಡಿಸಬೇಕು.

ಧಾರ್ಮಿಕ ಹಬ್ಬಗಳನ್ನು ಮಾಡುವ ಹಾಗೆ ದೇಶದ ಪವಿತ್ರ ಹಬ್ಬವನ್ನು ಮಾಡಬೇಕು ಎಂದು ಡಿಕೆಶಿ ಕರೆ ನೀಡಿದ್ರು. ಇಡೀ ರಾಷ್ಟ್ರ ಕವಲು ದಾರಿಯಲ್ಲಿ ಹೊರಟಿದೆ. ರಾಷ್ಟ್ರದ ಉದ್ದಗಲಕ್ಕೂ ಹೋರಾಟ ಆರಂಭವಾಗಿದೆ. ವೈಯಕ್ತಿಕ ಗುರುತಿಗೂ ಹೋರಾಟ ನಡೆದಿದೆ. ಇವತ್ತು ರೈತರು ಭವಿಷ್ಯವನ್ನು ರೂಪಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾನೆ. ಇಡೀ ಭಾರತ ಅನ್ನದಾತನ ಜೊತೆಗೆ ನಿಲ್ಲಬೇಕಾದ ಪರಿಸ್ಥಿತಿ ಬಂದಿದೆ ಎಂದರು

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago