ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.
ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿದೆ.
ಮುಂಭಾಗದಲ್ಲಿ ಹೆರಿಗೆ ತಜ್ಞೆ ಸೂಲಗಿತ್ತಿ ನರಸಮ್ಮ ಚಿತ್ರ, ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಚಿತ್ರ ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತಹ ಚಿತ್ರ ಪ್ರದರ್ಶನಗೊಂಡಿದೆ.
ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಹೆರಿಗೆ ತಜ್ಞೆ- ಸೂಲಗಿತ್ತಿ ನರಸಮ್ಮ, ಹಾಲಕ್ಕಿ ಸಮುದಾಯದ ವೃಕ್ಷ ಮಾತೆ- ತುಳಸಿ ಗೌಡ, ಪರಿಸರ ಪ್ರೇಮಿ- ಸಾಲುಮರದ ತಿಮ್ಮಕ್ಕ ಮೂವರು ಸಮಾಜಕ್ಕೆ ನಿಸ್ವಾರ್ಥ ಕೊಡುಗೆ ನೀಡಿ ಹೆಸರುವಾಸಿಯಾಗಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…