ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಹು ಸ್ತರದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ರೈಲ್ವೆ ನಿಲ್ದಾಣಗಳ ಸುತ್ತಮುತ್ತವೂ ಬಂದೋಬಸ್ತ್ ಹೆಚ್ಚಿಸಲಾಗಿದೆ. ಕೆಂಪುಕೋಟೆ ಸಮೀಪದ ರೈಲು ಮಾರ್ಗಗಳಲ್ಲಿ ಬೆಳಿಗ್ಗೆ 6.45ರಿಂದ 8.45ರ ಅವಧಿಯಲ್ಲಿ ರೈಲು ಸಂಚಾರವಿದೆ. ಹೀಗಾಗಿ ಹಳಿಗಳ ಬಳಿಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತದೆ ಎಂದು ಡಿಸಿಪಿ ಹರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಲಿನ ಪ್ರದೇಶಗಳ ಹೋಟೆಲ್‌ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದೂ ಅವರು ಈಗಾಗಲೇ ತಿಳಿಸಿದ್ದಾರೆ.
ಕೋವಿಡ್-19 ಲಕ್ಷಣ ಹೊಂದಿದ್ದವರು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮತ್ತು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ತಾಲೀಮು ನಡೆಸಿದ್ದವು.
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…