ಆಂಧ್ರಪ್ರದೇಶ : ಮೂರನೇ ತರಗತಿಯ ಬಾಲಕಿಯ ಮೇಲೆ ಮೂವರು ಬಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿ ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದಲ್ಲಿ ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕರು ಮಾಡಿದ ಪೈಶಾಚಿಕ ಕೃತ್ಯಕ್ಕೆ ಇಡೀ ನಗರವೇ ಬೆಚ್ಚಿ ಬಿದ್ದಿದೆ. ಮೂರನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯೊಬ್ಬಳನ್ನು ಮೂವರು ಬಾಲಕರು ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.
ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯ ಪಗಿದ್ಯಾಲ ಮಂಡಲದ ಮುಚ್‌ಮರಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೂವರು ಬಾಲಕರು ಸೇರಿ ಶಾಲಾ ರಜಾದಿನವಾದ ಭಾನುವಾರ ಈ ಕೃತ್ಯವೆಸಗಿದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದರೆ ಇಬ್ಬರು 6ನೇ ತರಗತಿ, ಇನ್ನೊಬ್ಬ ಬಾಲಕ 7ನೇ ತರಗತಿಯಲ್ಲಿ ಓದುತ್ತಿದ್ದ. ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಒಂದೇ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಪಾರ್ಕ್‌ನಲ್ಲಿ ಆಟವಾಡುತ್ತಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಅಪ್ರಾಪ್ತ ಬಾಲಕಿಯ ತಂದೆ ಭಾನುವಾರ ದೂರು ದಾಖಲಿಸಿದ್ದರು.
ಮುಚುಮರಿ ಪಾರ್ಕ್‌ನಲ್ಲಿ ಬಾಲಕಿ ಆಟವಾಡುತ್ತಿರುವುದನ್ನು ಗಮನಿಸಿದ ದುರುಳ ಬಾಲಕರು ಆಕೆಯನ್ನು ತಮ್ಮೊಂದಿಗೆ ಆಟವಾಡಲು ಬರುವಂತೆ ಕರೆದಿದ್ದಾರೆ. ಬಳಿಕ ನೀರಾವರಿ ಯೋಜನೆಯ ಸಮೀಪದ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದು ಆಕೆಯ ಬಾಯನ್ನು ಬಟ್ಟೆಯಿಂದ ಗಟ್ಟಿಯಾಗಿ ಕಟ್ಟಿ ಒಬ್ಬರಾದ ಮೇಲೊಬ್ಬರಂತೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದಾದ ನಂತರ ಬಾಲಕರಿಗೆ ಆಕೆ ತನ್ನ ಪೋಷಕರಿಗೆ ತಮ್ಮ ಬಗ್ಗೆ ಹೇಳಿದರೆ ಎಂಬ ಭಯ ಶುರುವಾಗಿದೆ. ಇದೇ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ ಪಾಪಿಗಳು ಬಳಿಕ ಆಕೆಯ ದೇಹವನ್ನು ನೀರಿಗೆ ಎಸೆದು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ.
ಮುಚ್ಚುಮರ್ರಿ ಪಾರ್ಕ್‌ನಲ್ಲಿ ಪೊಲೀಸರು , ಪೋಷಕರೆಲ್ಲರೂ ಹುಡುಕಾಟ ನಡೆಸಿದ್ದರು, ಆದರೂ ಬಾಲಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಸ್ನಿಫರ್ ಡಾಗ್ನ್ನು ಕರೆದುಕೊಂಡು ಬರಲಾಯಿತು. ನಾಯಿಯ ಸುಳಿವು ಪೊಲೀಸರನ್ನು ಮೂವರು ಅಪ್ರಾಪ್ತ ಬಾಲಕರ ನಿವಾಸಗಳಿಗೆ ಕರೆದೊಯ್ಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…