80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

Featured, ರಾಷ್ಟ್ರ ನ್ಯೂಸ್

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣ  ನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ ಕೋರಿದರು.

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ನಾಡಿನ ಜನತೆಗೆ ಮತ್ತು ಭಾರತದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುತ್ತೇನೆ. ದೇಶದ ಶಾಂತಿಗೊಸ್ಕರ ದುಡಿದ ಎಲ್ಲರಿಗೂ ವಂದನೆ ಸಲ್ಲಿಸುತ್ತೇನೆ. ಜನರ ಒಬ್ಬ ಸೇವಕನಾಗಿ‌ ಇಂದು ರಾಷ್ಟ್ರದ ಧ್ವಜವನ್ನ ಹಾರಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರನ್ನ ಒಟ್ಟಿಗೆ ತೆಗೆದುಕೊಂಡು ಹೋಗಿ ಶಾಂತಿ ನೆಮ್ಮದಿ , ಸಹಬಾಳ್ವೆಯನ್ನ ಕಾಪಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.

ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ನುಡಿಸಲಾಯಿತು. ಬಳಿಕ 21 ಗನ್‌ ಸಲ್ಯೂಟ್‌ ನೆರವೇರಿಸಲಾಯಿತು. ಇದೇ ವೇಳೆ ವಾಯುಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಯನ್ನೂ ಮಾಡಲಾಯಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

 

Leave a Reply