80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

Featured, ರಾಜ್ಯ ನ್ಯೂಸ್

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಧ್ವಜಾರೋಹಣನೆರವೇರಿಸಿ, ಬಳಿಕ ರಾಷ್ಟ್ರಗೀತೆ, ವಂದೇ ಮಾತರಂ ಗೀತೆಗೆ ಗೌರವ ಸಲ್ಲಿಸಿದರು. ಇದೇ ವೇಳೆ ನಾಡಿನ ಜನತೆಗೆ ಶುಭಾಶಯ ಕೋರಿದರು.

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

ನಾಡಿನ ಜನತೆಗೆ ಮತ್ತು ಭಾರತದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರುತ್ತೇನೆ. ದೇಶದ ಶಾಂತಿಗೊಸ್ಕರ ದುಡಿದ ಎಲ್ಲರಿಗೂ ವಂದನೆ ಸಲ್ಲಿಸುತ್ತೇನೆ. ಜನರ ಒಬ್ಬ ಸೇವಕನಾಗಿ‌ ಇಂದು ರಾಷ್ಟ್ರದ ಧ್ವಜವನ್ನ ಹಾರಿಸಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರನ್ನ ಒಟ್ಟಿಗೆ ತೆಗೆದುಕೊಂಡು ಹೋಗಿ ಶಾಂತಿ ನೆಮ್ಮದಿ , ಸಹಬಾಳ್ವೆಯನ್ನ ಕಾಪಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Leave a Reply