Featured

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ – Vishwanews24

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ನವದೆಹಲಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಮತದಾರರು 2018-19 ರಿಂದ 9.17 ಲಕ್ಷದಷ್ಟು ಹೆಚ್ಚಿದ್ದಾರೆ. ಏಪ್ರಿಲ್ 1ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಬಹುದು ಎಂದು ಹೇಳಿದ್ದಾರೆ

ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 5,21,73,579 ನೋಂದಾಯಿತ ಮತದಾರರನ್ನು ಹೊಂದಿದೆ.ಈ ಪೈಕಿ 12.15 ಲಕ್ಷ ಯುವ ಮತದಾರರಿದ್ದಾರೆ. ರಾಜ್ಯಾದ್ಯಂತ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

 

ಮನೆಯಿಂದ ಮತದಾನ ಹೇಗೆ?

  • ಚುನಾವಣೆ ಆಯೋಗದ ವೆಪ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ.
  • ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
  • ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ
  • ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
  • ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago