Featured

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ – vishwanews24

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್‌ಕಮ್‌ ಹೆಲ್ತ್‌ ಸಂಸ್ಥೆಯ ಸಹ ಸಂಸ್ಥಾಪಕ ರಿಷಿ ಶಾ ಅವರು ಬರೋಬ್ಬರಿ 8,300 ಕೋಟಿ ರೂ. ವಂಚನೆ ಮಾಡಿದ್ದಾರೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಷಿ ಶಾ ಅವರನ್ನು ಅಮೆರಿಕ ಜಿಲ್ಲಾ ಕೋರ್ಟ್‌ ದೋಷಿ ಎಂದು ಘೋಷಿಸಿದ್ದು, ಏಳೂವರೆ ವರ್ಷ ಶಿಕ್ಷೆ ವಿಧಿಸಿದೆ.

ಗೋಲ್ಡ್‌ ಸಚ್ಸ್‌ ಗ್ರೂಪ್‌, ಗೂಗಲ್‌ ಪೇರೆಂಟ್‌ ಆಲ್ಫಬೆಟ್‌ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರೈಜಕರ್ ನಂತಹ ಹೂಡಿಕೆದಾರರಿಗೆ ತಮ್ಮ ಸ್ಕೀಂ ಮೂಲಕ ರಿಷಿ ಶಾ 8,300 ಕೋಟಿ ರೂ. ವಂಚನೆ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ದೋಷಿ ಎಂದು ಘೋಷಿಸಿ, ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಮೆರಿಕ ಜಿಲ್ಲಾ ನ್ಯಾಯಾಧೀಶ ಥಾಮನ್‌ ಡರ್ಕಿನ್‌ ಅವರು ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ಇದು ಅಮೆರಿಕದ ಇತಿಹಾಸದಲ್ಲಿನ ಅತಿದೊಡ್ಡ ಕಾರ್ಪೋರೇಟ್‌ ಹಗರಣವಾಗಿದೆ ಎಂದು ಹೇಳಿದ್ದಾರೆ. ಇನ್ನು ರಿಷಿ ಶಾ, ಶ್ರದ್ಧಾ ಅಗರ್ವಾಲ್‌ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಬ್ರಾಡ್‌ ಪುರ್ಡೈ ಜತೆಗೂಡಿ ಹೂಡಿಕೆದಾರರಿಗೆ, ಕ್ಲಯಂಟ್‌ ಗಳಿಗೆ ದೊಡ್ಡ ಪ್ರಮಾಣದಲ್ಲಿ ವಂಚನೆ ಎಸಗಿದ್ದಾರೆ ಎನ್ನಲಾಗಿದೆ.

ಇನ್ನು ಹೂಡಿಕೆದಾರರಿಗೆ ಸುಳ್ಳು ಹೇಳಿ ವಂಚನೆ, ಸುಳ್ಳು ಜಾಹೀರಾತು ಪ್ರಕಟಿಸಿ ವಂಚನೆ ಹೀಗೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ರಿಷಿ ಶಾಗೆ 15ವರ್ಷಗಳ ಶಿಕ್ಷೆ ವಿಧಿಸಬೇಕೆಂದು ಕೋರ್ಟ್‌ಗೆ ಸಂತ್ರಸ್ತರು ಮನವಿ ಕೂಡ ಮಾಡಿದ್ದರು. ಆದರೆ ಕೋರ್ಟ್ ಏಳೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago