Featured

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಪೋನ್ ಕರೆ ಮೂಲಕ ಕುಟುಂಬದ ಯಜಮಾನನಿಗೆ ಧೈರ್ಯ ನೀಡಿದ ಗೃಹ ಸಚಿವ ಪರಮೇಶ್ವರ್ – vishwanews24

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ ಗೃಹ ಸಚಿವ

ಉಡುಪಿ : ಸಂತೆಕಟ್ಟೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಪೋನ್ ಕರೆ ಮೂಲಕ ಧೈರ್ಯ ನೀಡಿದ್ದಾರೆ.

ಆರೋಪಿಯನ್ನು ಶೀಘ್ರವೇ ಬಂದಿಸಿ ಜನರನ್ನು ಭಯದಿಂದ ಮುಕ್ತಿಗೊಳಿಸಿ. ಸ್ಥಳೀಯರು ಈ ಘಟನೆಯ ಬಳಿಕ ದೀಪಾವಳಿಯನ್ನು ಕೂಡಾ ಆಚರಣೆ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರಲ್ಲಿ ನೂರ್ ಮಹಮ್ಮದ್ ಅವರು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಗೃಹ ಸಚಿವ ಪರಮೇಶ್ವರ್ ಅವರು ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿ, ನೂರ್ ಮಹಮ್ಮದ್ ಅವರಿಗೆ ಧೈರ್ಯ ನೀಡಿದ್ದಾರೆ.

ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನೂರ್ ಮಹಮ್ಮದ್, ನಮ್ಮ ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಇಂತಹ ಸುದ್ದಿಗಳನ್ನು ಹರಡಬೇಡಿ. ನಮಗೆ ಮನೆಯಿಂದ ಹೊರಗೆ ಬರಲು ಕೂಡಾ ಹೆದರಿಕೆಯಾಗುತ್ತಿದೆ. ಹೀಗಾಗಿ ಆರೋಪಿಯನ್ನು ಶೀಘ್ರವೇ ಬಂಧಿಸಿ. ಪೋಲಿಸರು ನಮಗೆ ಒಳ್ಳೆ ಸಹಕಾರ‌ ನೀಡಿದ್ದಾರೆ, ಇನ್ನು ಮುಂದೆ ಕೂಡಾ ನಾವು ತನಿಖೆಗೆ ಸಹಕರಿಸುತ್ತೆವೆ. 15 ನಿಮಿಷದಲ್ಲಿ ಇಂತಹ ಕೃತ್ಯ ಆಗಿದೆ ಎಂದರೆ ಮನುಷ್ಯತ್ವ ಇಲ್ಲವೆ? ನನ್ನ ತಾಯಿ ಈಗ ಆರೋಗ್ಯವಾಗಿದ್ದಾರೆ ಅವರನ್ನು ಅವರ ಮನೆಗೆ‌ ಕಳುಹಿಸಿ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಎಂಎಲ್ ಸಿ ಮಂಜುನಾಥ ಭಂಡಾರಿ, ಮತ್ತು ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago