ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ – vishwanews24

Featured, ದಕ್ಷಿಣ ಕನ್ನಡ, ರಾಷ್ಟ್ರ ನ್ಯೂಸ್

ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ : ಮಂಗಳೂರಿನ ಕ್ಯಾ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಸೇರಿ 4 ಯೋಧರು ಹುತಾ​ತ್ಮ​ರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ, ಅಡಗಿರುವ ಇಬ್ಬರು ಉಗ್ರ​ರಿ​ಗಾಗಿ ಸೇನಾ ಕಾರ್ಯಾಚರಣೆ ಮುಂದಿವರೆದಿದೆ.

ಇಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿ​ತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂ​ಡಿನ ಚಕಮಕಿ ನಡೆದಿದ್ದು, ಇಬ್ಬರು ಸೇನಾ​​​ಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದು ವರೆಸಲಾಗಿದ್ದು, ಅಡಗಿಕೊಂಡಿರುವ ಇಬ್ಬರು ಉಗ್ರರಿರಾಗಿ ಬಲೆ ಬೀಸಲಾಗಿದೆ.

ಮಂಗಳೂರು: ಲಾಡ್ಜ್ ನ ರೂಮ್ ನಲ್ಲಿ ಬೆಂಕಿ ; ಓರ್ವ ಸಾವು – vishwanews24

ದಕ್ಷಿಣ ಕನ್ನಡದ ಪ್ರಾಂಜಲ್‌: ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್‌ ಕ್ಯಾಪ್ಟನ್‌ ಪ್ರಾಂಜಲ್‌ ಅವರು ಮಂಗಳೂರು ಎಂಆರ್‌ಪಿಎಲ್‌ ನಿವೃತ್ತ ಎಂಡಿ ವೆಂಕಟೇಶ್‌ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್‌ ಅವರು ಮೇ 31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್‌ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್‌ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

 

Leave a Reply