ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿ 4 ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ನಡುವೆ, ಅಡಗಿರುವ ಇಬ್ಬರು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದಿವರೆದಿದೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದು ವರೆಸಲಾಗಿದ್ದು, ಅಡಗಿಕೊಂಡಿರುವ ಇಬ್ಬರು ಉಗ್ರರಿರಾಗಿ ಬಲೆ ಬೀಸಲಾಗಿದೆ.
ದಕ್ಷಿಣ ಕನ್ನಡದ ಪ್ರಾಂಜಲ್: ಹುತಾತ್ಮರ ಪೈಕಿ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಪ್ರಾಂಜಲ್ ಅವರು ಮಂಗಳೂರು ಎಂಆರ್‌ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಅವರ ಏಕೈಕ ಪುತ್ರ. ಮೂಲತಃ ಅವಿಭಜಿತ ದಕ್ಷಿಣ ಕನ್ನಡದವರಾಗಿದ್ದ ವೆಂಕಟೇಶ್ ಅವರು ಮೇ 31ರಂದು ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…