ಮಂಗಳೂರು : ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ. 27 ರಂದು ಸಂಜೆ 8 ಗಂಟೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಿಲಗ್ರೆಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜ ದ ಕಡೆಗೆ ಬೈಕ್ ನಲ್ಲಿ ಹೊರಟಿರುವಾಗ ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡಿತ್ತು.
ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…