Featured

850 ರೈತರ ಸಾಲವನ್ನು ತಾವೇ ಪಾವತಿಸಲಿರುವ ಖ್ಯಾತ ಹಿಂದಿ ಚಲನಚಿತ್ರ ನಟ ಅಮಿತಾಬ್‌ ಬಚ್ಚನ್‌

ಮುಂಬೈ: ಉತ್ತರ ಪ್ರದೇಶದ ಸುಮಾರು 850 ರೈತರ ಸಾಲವನ್ನು ತಾವೇ ಪಾವತಿಸುವುದಾಗಿ ಖ್ಯಾತ ಹಿಂದಿ ಚಲನ ಚಿತ್ರ ನಟ ಅಮಿತಾಬ್‌ ಬಚ್ಚನ್‌ ತಿಳಿಸಿದ್ದಾರೆ.

‘ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈ ರೈತರು ಸಾಲ ಮರುಪಾವತಿಸಲು ಸಾಧ್ಯವಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳದಂತೆ ಕೆಲವು ದಿನಗಳ ಹಿಂದೆ ಈ ರೈತರ ಸಾಲವನ್ನು ಪಾವತಿಸಲಾಯಿತು.

ಈ ಮೊದಲು ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ವಿದರ್ಭ ಪ್ರದೇಶದ ರೈತರ ಸಾಲ ತೀರಿಸಿ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ 850 ರೈತರನ್ನು ಗುರುತಿಸಲಾಗಿದೆ. ಈ ರೈತರ ಸಾಲ ₹5.5 ಕೋಟಿಯಾಗುತ್ತದೆ. ಈ ಸಾಲವನ್ನು ನಾನೇ ತೀರಿಸುತ್ತೇನೆ’ ಎಂದು ಬ್ಲಾಗ್‌ನಲ್ಲಿ ಅಮಿತಾಬ್‌ ಬರೆದಿದ್ದಾರೆ.

‘ರೈತರಿಗೆ ನೆರವಾಗಿದ್ದು ತೃಪ್ತಿ ತಂದಿದೆ. ಇದೇ ರೀತಿ ನಮಗಾಗಿ ಎಲ್ಲ ರೀತಿಯಲ್ಲೂ ತ್ಯಾಗ ಮಾಡುವವರಿಗಾಗಿ ನೆರವು ನೀಡುವುದು ಅಗತ್ಯವಿದೆ. ದೇಶದ ಇತರ ಭಾಗಗಳಲ್ಲಿ ಸಂಕಷ್ಟದಲ್ಲಿರುವವವರಿಗೆ ನೆರವು ನೀಡಬೇಕು. ಮುಂದಿನ ದಿನಗಳಲ್ಲಿ ಈ ಕಾರ್ಯ ನಡೆಯಲಿದೆ’ ಎಂದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago