Featured

ಕುಂದಾಪುರ : ಮೂರು ಮುತ್ತು ಖ್ಯಾತಿಯ ರಂಗಕಲಾವಿದ ಅಶೋಕ್ ಶ್ಯಾನುಭಾಗ್ ಇನ್ನಿಲ್ಲ – vishwanews24

ಕುಂದಾಪುರ : ಮೂರು ಮುತ್ತು ಖ್ಯಾತಿಯ ರಂಗಕಲಾವಿದ ಅಶೋಕ್ ಶ್ಯಾನುಭಾಗ್ ಇನ್ನಿಲ್ಲ

ಕುಂದಾಪುರ : ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು.

ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ. ಕಸ್ತೂರಿ ಶ್ಯಾನುಭಾಗ್ ಅವರ ಪುತ್ರ ಅಶೋಕ್ ಶ್ಯಾನುಭೋಗ್ ಅವರು 1979ರಲ್ಲಿ ರೂಪಕಲಾ ಸಂಸ್ಥೆಯಲ್ಲಿ ಬಾಲ ಕಲಾವಿದರಾಗಿ ಸತ್ಯ ಹರಿಶ್ಚಂದ್ರ, ಟಿಪ್ಪು ಸುಲ್ತಾನ್ ನಾಟಕದ ಮೂಲಕ ರಂಗಭೂಮಿ ಪ್ರವೇಶಿಸಿದವರು. ಓದಿನ ಬಳಿಕ ನಿರಂತರವಾಗಿ ರಂಗಭೂಮಿ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

ಸ್ವ ಉದ್ಯೋಗ ಮಾಡಿಕೊಂಡಿದ್ದ ಅಶೋಕ್ ಅವರು ನಾಟಕವನ್ನೇ ಬದುಕಿನ ಭಾಗವಾಗಿಸಿಕೊಂಡಿದ್ದರು. ರೂಪಕಲಾ ಸಂಸ್ಥೆಯ ದಿ. ಬಾಲಕೃಷ್ಣ ಪೈ (ಕುಳ್ಳಪ್ಪು) ಅವರ ನೆಚ್ಚಿನ ಶಿಷ್ಯರಾಗಿದ್ದ ಅವರು ಕುಳ್ಳಪ್ಪು ಅವರ 53 ನಾಟಕಗಳಲ್ಲಿ ಹಾಗೂ ಸತೀಶ್ ಪೈ ಅವರ 11 ನಾಟಕ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರೂಪಕಲಾ ಸಂಸ್ಥೆಯ ನಾಟಕಗಳು ಕನ್ನಡ ಮತ್ತು ಕೊಂಕಣಿಯಲ್ಲಿ ಏಳು ಸಾವಿರಕ್ಕೂ ಮಿಕ್ಕಿ ಪ್ರದರ್ಶನ ಕಂಡಿದ್ದವು. ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಇವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

18 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

18 hours ago