ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ.
ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…