ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ  – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ 

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಕಳೆದ 8 ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡದಲ್ಲಿ 13, ಉಡುಪಿಯಲ್ಲಿ 13, ಶಿವಮೊಗ್ಗದಲ್ಲಿ 14, ಬೆಂಗಳೂರಿನಲ್ಲಿ 138 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 344 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ. ಹಾಗೂ ಜನವರಿಯಿಂದ ಇದುವರೆಗೂ ರಾಜ್ಯದಲ್ಲಿ 3,728 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಡೆಂಗ್ಯೂನ ಆರಂಭಿಕ ಲಕ್ಷಣಗಳು ಜ್ವರದಂತೆಯೇ ಇರುತ್ತವೆ, ಹಾಗಾಗಿ ಜನರು ಅದನ್ನ ಬಹುಬೇಗ ಗುರುತಿಸುವುದಿಲ್ಲ. ಸಾಮಾನ್ಯವಾಗಿ ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ 10 ದಿನಗಳ ನಂತರ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ : ಶಿಕ್ಷಕರ ನೇಮಕಾತಿ ಹಗರಣ : 10 ದಿನ ಸಚಿವ ಪಾರ್ಥ ಚಟರ್ಜಿ ಇ.ಡಿ ಕಸ್ಟಡಿಗೆ – Vishwanews24 

Leave a Reply