ಮಂಗಳೂರು : ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆ : ನಾಳೆ ಮಧ್ಯ ರಾತ್ರಿವರೆಗೆ ನಿಷೇಧಾಜ್ಷೆ ಜಾರಿ – Vishwanews24

Featured, ದಕ್ಷಿಣ ಕನ್ನಡ

ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆ : ನಾಳೆ ಮಧ್ಯ ರಾತ್ರಿವರೆಗೆ ನಿಷೇಧಾಜ್ಷೆ ಜಾರಿ 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಾಲೂಕುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ 5 ಮಂದಿಗಿಂತ ಹೆಚ್ಚು ಜನ ಒಂದೇ ಕಡೆ ಸೇರಬಾರದಂತೆ ಆದೇಶ ಹೊರಡಿಸಲಾಗಿದೆ. ಜೊತೆಗೆ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

ಕೊಲೆ ಪ್ರಕರಣ ಸಂಬಂಧ ಉದ್ವಿಗ್ನ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಪ್ರವೀಣ್ ನೆಟ್ಟಾರ್ ಹತ್ಯೆ : ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಉದ್ದೇಶ.. ಇದರ ಹಿಂದೆ ದೊಡ್ಡ ಷಡ್ಯಂತ್ರ : ಸಚಿವೆ ಶೋಭಾ – Vishwanews24

 

Leave a Reply